Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:8 - ಕನ್ನಡ ಸಮಕಾಲಿಕ ಅನುವಾದ

8 “ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗ ನೀವು ದೊಡ್ಡ ಗುಂಪಾಗಿರುವದರಿಂದಲೂ ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿರುವದರಿಂದಲೂ ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರೋಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:8
15 ತಿಳಿವುಗಳ ಹೋಲಿಕೆ  

ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.


ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.


ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು