2 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸಮಕಾಲಿಕ ಅನುವಾದ1 ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು. ಅಧ್ಯಾಯವನ್ನು ನೋಡಿ |