Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:14
20 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.


ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು