2 ಪೂರ್ವಕಾಲ ವೃತ್ತಾಂತ 14:7 - ಕನ್ನಡ ಸಮಕಾಲಿಕ ಅನುವಾದ7 ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.