2 ಪೂರ್ವಕಾಲ ವೃತ್ತಾಂತ 15:16 - ಕನ್ನಡ ಸಮಕಾಲಿಕ ಅನುವಾದ16 ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.