2 ಪೂರ್ವಕಾಲ ವೃತ್ತಾಂತ 15:8 - ಕನ್ನಡ ಸಮಕಾಲಿಕ ಅನುವಾದ8 ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು. ಅಧ್ಯಾಯವನ್ನು ನೋಡಿ |