2 ಪೂರ್ವಕಾಲ ವೃತ್ತಾಂತ 16:3 - ಕನ್ನಡ ಸಮಕಾಲಿಕ ಅನುವಾದ3 “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದ ಇದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಯೇಲರ ಅರಸ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.” ಅಧ್ಯಾಯವನ್ನು ನೋಡಿ |