2 ಪೂರ್ವಕಾಲ ವೃತ್ತಾಂತ 16:9 - ಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.” ಅಧ್ಯಾಯವನ್ನು ನೋಡಿ |