2 ಪೂರ್ವಕಾಲ ವೃತ್ತಾಂತ 17:11 - ಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು. ಅಧ್ಯಾಯವನ್ನು ನೋಡಿ |