2 ಪೂರ್ವಕಾಲ ವೃತ್ತಾಂತ 17:17 - ಕನ್ನಡ ಸಮಕಾಲಿಕ ಅನುವಾದ17 ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕನೂ ರಣವೀರನೂ ಆದ ಎಲ್ಯಾದ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ. ಅಧ್ಯಾಯವನ್ನು ನೋಡಿ |
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.