2 ಪೂರ್ವಕಾಲ ವೃತ್ತಾಂತ 17:3 - ಕನ್ನಡ ಸಮಕಾಲಿಕ ಅನುವಾದ3 ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.