Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:9 - ಕನ್ನಡ ಸಮಕಾಲಿಕ ಅನುವಾದ

9 ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಯೆಹೋವಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:9
22 ತಿಳಿವುಗಳ ಹೋಲಿಕೆ  

ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.


ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.


ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.


“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.


ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.


ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು