2 ಪೂರ್ವಕಾಲ ವೃತ್ತಾಂತ 18:12 - ಕನ್ನಡ ಸಮಕಾಲಿಕ ಅನುವಾದ12 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು. ಅಧ್ಯಾಯವನ್ನು ನೋಡಿ |