Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, ‘ಇಸ್ರಯೇಲರ ಅರಸ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರೇಪಿಸಬಲ್ಲಿರಿ?’ ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ತನ್ನ ಹತ್ತಿರ ನಿಂತವರನ್ನು - ಇಸ್ರಾಯೇಲ್ಯರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ‘ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:19
14 ತಿಳಿವುಗಳ ಹೋಲಿಕೆ  

“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.


ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.


ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.


ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.


ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.


ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು