2 ಪೂರ್ವಕಾಲ ವೃತ್ತಾಂತ 18:21 - ಕನ್ನಡ ಸಮಕಾಲಿಕ ಅನುವಾದ21 “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |