2 ಪೂರ್ವಕಾಲ ವೃತ್ತಾಂತ 18:29 - ಕನ್ನಡ ಸಮಕಾಲಿಕ ಅನುವಾದ29 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು. ಅಧ್ಯಾಯವನ್ನು ನೋಡಿ |