2 ಪೂರ್ವಕಾಲ ವೃತ್ತಾಂತ 18:3 - ಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು - ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೇಯಲ್ಲವೋ. ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು. ಅಧ್ಯಾಯವನ್ನು ನೋಡಿ |