2 ಪೂರ್ವಕಾಲ ವೃತ್ತಾಂತ 18:33 - ಕನ್ನಡ ಸಮಕಾಲಿಕ ಅನುವಾದ33 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸಿರಿಯಾದವರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿ ಇದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಆ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂದಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿ |