2 ಪೂರ್ವಕಾಲ ವೃತ್ತಾಂತ 18:5 - ಕನ್ನಡ ಸಮಕಾಲಿಕ ಅನುವಾದ5 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್‌ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |