Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:5 - ಕನ್ನಡ ಸಮಕಾಲಿಕ ಅನುವಾದ

5 “ನಾನು ಕಟ್ಟಿಸುವ ಆಲಯವು ದೊಡ್ಡದು. ಏಕೆಂದರೆ ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು; ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:5
18 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.


ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು.


ನನಗೆ ಮರಗಳನ್ನು ಬಹಳವಾಗಿ ಸಿದ್ಧಮಾಡುವುದಕ್ಕೆ ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ, ಅದ್ಭುತಕರವಾದದ್ದಾಗಿಯೂ ಇರಬೇಕು.


ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು