2 ಪೂರ್ವಕಾಲ ವೃತ್ತಾಂತ 2:7 - ಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಬಂಗಾರದಲ್ಲಿಯೂ, ಬೆಳ್ಳಿಯಲ್ಲಿಯೂ, ಕಂಚಿನಲ್ಲಿಯೂ, ಕಬ್ಬಿಣದಲ್ಲಿಯೂ, ರಕ್ತವರ್ಣ, ಲೋಹಿತ ವರ್ಣ, ನೀಲ ವರ್ಣಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನನ್ನು, ನನ್ನ ತಂದೆ ದಾವೀದನು ಸಿದ್ಧಮಾಡಿದ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ನನ್ನ ಬಳಿಯಲ್ಲಿರುವ ಕುಶಲಕರ್ಮಿಗಳ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿ ಇರುವವನನ್ನು ನನ್ನ ಬಳಿಗೆ ಕಳುಹಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಇವುಗಳ ಕೆಲಸಮಾಡುವದರಲ್ಲಿಯೂ ಧೂಮ್ರ ರಕ್ತ ನೀಲವರ್ಣಗಳ ಬಟ್ಟೆಯನ್ನು ನೇಯುವದರಲ್ಲಿಯೂ ಚಿತ್ರ ಕೆತ್ತುವದರಲ್ಲಿಯೂ ಜಾಣನಾದ ಮನುಷ್ಯನನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯು ಗೊತ್ತು ಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇರುವಂಥ ಜಾಣರೊಂದಿಗೆ ಅವನು ಕೆಲಸಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು. ಅಧ್ಯಾಯವನ್ನು ನೋಡಿ |