Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:13 - ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಲ್ಲಾ ಯೆಹೂದ್ಯರೂ ಅವರ ಹೆಂಡತಿಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:13
8 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.


ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.


ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.


ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು