Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:24 - ಕನ್ನಡ ಸಮಕಾಲಿಕ ಅನುವಾದ

24 ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:24
10 ತಿಳಿವುಗಳ ಹೋಲಿಕೆ  

ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.


ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?


ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.


ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.


ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು