Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:3 - ಕನ್ನಡ ಸಮಕಾಲಿಕ ಅನುವಾದ

3 ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:3
20 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.


ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು