Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:33 - ಕನ್ನಡ ಸಮಕಾಲಿಕ ಅನುವಾದ

33 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಅವನು ಉನ್ನತಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:33
11 ತಿಳಿವುಗಳ ಹೋಲಿಕೆ  

ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.


ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.


ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.


ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು