Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:7 - ಕನ್ನಡ ಸಮಕಾಲಿಕ ಅನುವಾದ

7 ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:7
23 ತಿಳಿವುಗಳ ಹೋಲಿಕೆ  

ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ಆದರೆ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿ ಇದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ಕರೆದುಕೊಂಡು ಬಂದು, ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ, ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು. ಅವನಿಗೆ ಇಸಾಕನನ್ನು ಕೊಟ್ಟೆನು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.


ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


“ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು