Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:10
17 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.


ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.


ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.


ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.


ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.


ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.


ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.


ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು