2 ಪೂರ್ವಕಾಲ ವೃತ್ತಾಂತ 21:12 - ಕನ್ನಡ ಸಮಕಾಲಿಕ ಅನುವಾದ12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿದು. ಆತನು ಹೇಳುವುದೇನೆಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ. ಅಧ್ಯಾಯವನ್ನು ನೋಡಿ |