2 ಪೂರ್ವಕಾಲ ವೃತ್ತಾಂತ 21:13 - ಕನ್ನಡ ಸಮಕಾಲಿಕ ಅನುವಾದ13 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಪ್ರೇರಿಸಿದಿ; ಮತ್ತು ನಿನ್ನ ತಂದೆಯ ಕುಟುಂಬಕ್ಕೆ ಸೇರಿ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು. ಅಧ್ಯಾಯವನ್ನು ನೋಡಿ |