2 ಪೂರ್ವಕಾಲ ವೃತ್ತಾಂತ 21:16 - ಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿ |
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.