2 ಪೂರ್ವಕಾಲ ವೃತ್ತಾಂತ 22:1 - ಕನ್ನಡ ಸಮಕಾಲಿಕ ಅನುವಾದ1 ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರೂಸಲೇವಿುನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ [ಯೆಹೋರಾಮನ] ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು. ಅಧ್ಯಾಯವನ್ನು ನೋಡಿ |