Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:3 - ಕನ್ನಡ ಸಮಕಾಲಿಕ ಅನುವಾದ

3 ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತನ್ನ ತಾಯಿಯ ದುರ್ಬೋಧೆಯನ್ನು ಆಲೈಸಿ ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:3
16 ತಿಳಿವುಗಳ ಹೋಲಿಕೆ  

ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.


ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.


ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.


ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.


ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.


ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು