2 ಪೂರ್ವಕಾಲ ವೃತ್ತಾಂತ 22:4 - ಕನ್ನಡ ಸಮಕಾಲಿಕ ಅನುವಾದ4 ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದದರಿಂದ ಇವನು ಯೆಹೋವನಿಗೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು. ಅಧ್ಯಾಯವನ್ನು ನೋಡಿ |