Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:9
14 ತಿಳಿವುಗಳ ಹೋಲಿಕೆ  

ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.


ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.


ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.


ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.


ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು.


ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ


ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.


ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.


ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು