Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:11
34 ತಿಳಿವುಗಳ ಹೋಲಿಕೆ  

ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”


ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.


ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.


ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,


ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.


ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


“ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.


ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.


ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು