Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:20 - ಕನ್ನಡ ಸಮಕಾಲಿಕ ಅನುವಾದ

20 ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಮೇಲೆ ಅವನು ಶತಾಧಿಪತಿಗಳು ಶ್ರೀಮಂತರು ಜನನಾಯಕರು ಸಾಧಾರಣಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:20
4 ತಿಳಿವುಗಳ ಹೋಲಿಕೆ  

ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು