2 ಪೂರ್ವಕಾಲ ವೃತ್ತಾಂತ 24:12 - ಕನ್ನಡ ಸಮಕಾಲಿಕ ಅನುವಾದ12 ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅರಸನೂ ಯೆಹೋಯಾದನೂ ಅದನ್ನು ಸರ್ವೇಶ್ವರನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಇವರು ಸರ್ವೇಶ್ವರನ ಆಲಯದ ದುರಸ್ತಿ ಕೆಲಸಕ್ಕಾಗಿ, ಶಿಲ್ಪಿಗಾರರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು. ಅಧ್ಯಾಯವನ್ನು ನೋಡಿ |