Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:14 - ಕನ್ನಡ ಸಮಕಾಲಿಕ ಅನುವಾದ

14 ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:14
13 ತಿಳಿವುಗಳ ಹೋಲಿಕೆ  

ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.


ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.


ಮೋಶೆಯ ಸಂಗಡ ಮಾತನಾಡಿ, “ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ,” ಎಂದು ಹೇಳಿದರು.


ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.


ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.


ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು