Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:2 - ಕನ್ನಡ ಸಮಕಾಲಿಕ ಅನುವಾದ

2 ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಜಕನಾದ ಯೆಹೋಯಾದನು ಜೀವದಿಂದಿರುವ ತನಕ ಯೆಹೋವಾಷನು ಯೆಹೋವನಿಗೆ ಯೋಗ್ಯವಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:2
10 ತಿಳಿವುಗಳ ಹೋಲಿಕೆ  

ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು