Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:20 - ಕನ್ನಡ ಸಮಕಾಲಿಕ ಅನುವಾದ

20 ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:20
24 ತಿಳಿವುಗಳ ಹೋಲಿಕೆ  

ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.


ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.


ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.


ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು