2 ಪೂರ್ವಕಾಲ ವೃತ್ತಾಂತ 24:23 - ಕನ್ನಡ ಸಮಕಾಲಿಕ ಅನುವಾದ23 ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ವರುಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರೋಧವಾಗಿ ಹೊರಟಿತು. ಆ ಸೈನ್ಯದವರು ಯೆಹೂದದೇಶದೊಳಗೆ ನುಗ್ಗಿ ಯೆರೂಸಲೇವಿುಗೆ ಬಂದು ಇಸ್ರಾಯೇಲ್ಯರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |