2 ಪೂರ್ವಕಾಲ ವೃತ್ತಾಂತ 24:25 - ಕನ್ನಡ ಸಮಕಾಲಿಕ ಅನುವಾದ25 ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.