2 ಪೂರ್ವಕಾಲ ವೃತ್ತಾಂತ 24:6 - ಕನ್ನಡ ಸಮಕಾಲಿಕ ಅನುವಾದ6 ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಅರಸನಾದ ಯೆಹೋವಾಷನು ಮಹಾಯಾಜಕನಾದ ಯೆಹೋಯಾದನನ್ನು ಕರೆದು, “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರುಸಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |