Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:7 - ಕನ್ನಡ ಸಮಕಾಲಿಕ ಅನುವಾದ

7 ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:7
18 ತಿಳಿವುಗಳ ಹೋಲಿಕೆ  

ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.


ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.


ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು