2 ಪೂರ್ವಕಾಲ ವೃತ್ತಾಂತ 25:19 - ಕನ್ನಡ ಸಮಕಾಲಿಕ ಅನುವಾದ19 ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು. ಅಧ್ಯಾಯವನ್ನು ನೋಡಿ |