Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೆಹೂದ್ಯರು ಇಸ್ರಯೇಲರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲ್ ಯೆಹೂದವನ್ನು ಸೋಲಿಸಿಬಿಟ್ಟಿತು. ಯೆಹೂದದ ಸೈನಿಕರೆಲ್ಲಾ ತಮ್ಮತಮ್ಮ ಮನೆಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:22
6 ತಿಳಿವುಗಳ ಹೋಲಿಕೆ  

ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.


ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ಯೋವಾಷನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು