27 ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.
27 ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
27 ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
27 ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
27 ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.