ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.
ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.