8 ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.
8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
8 ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?
ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.
ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.
ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.
ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.
ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು.
ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.