Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಎಲ್ಲಾ ಯೆಹೂದ್ಯರೂ ಕೂಡಿ ಹದಿನಾರು ವರುಷದವನಾಗಿದ್ದ ಉಜ್ಜೀಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:1
12 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.


ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ದೇಶದ ಜನರು ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.


ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.


ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.


ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.


ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.


ಇಸ್ರಾಯೇಲಿನ ಅರಸನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೋವಾಷನ ಮಗ ಅಮಚ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು